ಹಂಪಿಯಲ್ಲಿ 2022ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ :ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿ

ಹರಿಹರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕ್ಷಣಗಣನೆ ಕಾರ್ಯಕ್ರಮಗಳನ್ನು ಆಯೋಜಿಸುವ ನಿಟ್ಟಿನಲ್ಲಿ ಏಪ್ರಿಲ್ 27ರಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್‌ ಸಿಂಗ್ ಅವರ ಜೊತೆಯಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು.

ಈಗಾಗಲೇ ಕೊಪ್ಪಳದ ಹನುಮನ ಜನ್ಮಸ್ಥಳ ಅಂಜನಾದ್ರಿಯಲ್ಲಿ, ಚಿತ್ರದುರ್ಗದ ಏಳು ಸುತ್ತಿನ ಕಲ್ಲಿನ ಕೋಟೆಯಲ್ಲಿ ಯೋಗ ಉತ್ಸವಗಳನ್ನ ಯಶಸ್ವಿಯಾಗಿ ಆಚರಿಸಲಾಗಿದೆ. ಮುಂಬರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯವಂತೆ ಆಯೋಜಿಸುವ ಉದ್ದೇಶವನ್ನು ಹೊಂದಲಾಗಿದೆ. ಈ ನಿಟ್ಟಿನಲ್ಲಿ ಇಂದು ಹಂಪಿಯ ಸ್ಮಾರಕಗಳಾದ ವಿಠ್ಠಲ ದೇವಾಲಯದ ಆವರಣದಲ್ಲಿರುವ ಕಲ್ಲಿನ ರಥ, ಲೋಟಸ್‌ ಮಹಲ್‌, ವಿರುಪಾಕ್ಷೇಶ್ವರ ದೇವಾಲಯ, ಯೋಗ ಲಕ್ಷ್ಮಿ ನರಸಿಂಹ ಸ್ಮಾರಕಆನೆ ಮತ್ತು ಕುದುರೆ ಲಾಯಗಳು, ಸಾಸುವೇ ಕಾಳು ಗಣೇಶ, ಬಡವಿ ಲಿಂಗ ಸೇರಿದಂತೆ ಹಲವಾರು ಸ್ಮಾರಕಗಳ ಮುಂದೆ ಯೋಗ ಉತ್ಸವ ಆಯೋಜಿಸುವ ನಿಟ್ಟಿನಲ್ಲಿ ಸಚಿವರೊಂದಿಗೆ ಪರಿಶೀಲನೆ ನಡೆಸಲಾಯಿತು. ಮುಂದಿನ ದಿನಗಳಲ್ಲಿ ಪ್ರತಿಯೊಂದು ಸ್ಮಾರಕದ ಮುಂದೆಯೂ ಕೌಂಟ್‌ ಡೌನ್‌ ಕಾರ್ಯಕ್ರಮಗಳನ್ನು ಆಯೋಜಿಸುವುದು ಹಾಗೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ದಿನದಂದು ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸುವ ಬಗ್ಗೆ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles