ಸುಬ್ರಹ್ಮಣ್ಯ(ದ.ಕ.): ದ.ಕ. ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಕಾರ್ತಿಕ ಬಹುಳ ದ್ವಾದಶಿ ನ. 27ರಂದು ಕೊಪ್ಪರಿಗೆ ಏರುವುದರ ಮೂಲಕ ಚಂಪಾಷಷ್ಠಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಆರಂಭಗೊಳ್ಳುತ್ತದೆ. ಮುಂಜಾನೆ 7.42ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿಅವಳಿ ಕೊಪ್ಪರಿಗೆಗಳನ್ನು ಏರಿಸಲಾಯಿತು.
ಪೂರ್ವಶಿಷ್ಟ ಸಂಪ್ರದಾಯದಂತೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಆರಂಭದಲ್ಲಿ ಪ್ರಧಾನ ಅರ್ಚಕರು ರಾಮ- ಲಕ್ಷ್ಮಣ ಹೆಸರಿನ ಜೋಡಿ ಅನ್ನದ ಕೊಪ್ಪರಿಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವಳದ ಒಳಾಂಗಣದಲ್ಲಿರುವ ದೊಡ್ಡದಾದ ಎರಡು ಒಲೆಗಳ ಮೇಲೆ ಕೊಪ್ಪರಿಗೆಗಳನ್ನು ಏರಿಸಲಾಯಿತು.
ಡಿ.7ರಂದು ಬ್ರಹ್ಮರಥ
ನ.30ರಂದು ಲಕ್ಷ ದೀಪೋತ್ಸವ, ಡಿ. 1ರಂದು ಶೇಷವಾಹನೋತ್ಸವ, ಡಿ. 2ರಂದು ಅಶ್ವವಾಹನೋತ್ಸವ, ಡಿ. 3ರಂದು ಮಯೂರ ವಾಹನೋತ್ಸವ, ಡಿ. 4ರಂದು ಶೇಷ ವಾಹನೋತ್ಸವ, ಡಿ.5ರಂದು ಚೌತಿ ಹೂವಿನ ತೇರಿನ ಉತ್ಸವ, ಡಿ. 6ರಂದು ಮಾರ್ಗಶಿರ ಶುದ್ಧ ಪಂಚಮಿ ದಿನ ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ. 7ರಂದು ಮಾರ್ಗಶಿರ ಶುದ್ಧ ಷಷ್ಠಿಯಂದು ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ. 8ರಂದು ದೇಧಿವರ ಅವಭೃತೋತ್ಸವ ಮತ್ತು ನೌಕಾವಿಹಾರ, ಡಿ. 12ರಂದು ಕೊಪ್ಪರಿಗೆ ಇಳಿಯುವುಧಿದಧಿರೊಂದಿಗೆ ಜಾತ್ರೋತ್ಸವ ಸಮಾಪನಗೊಳ್ಳಲಿದೆ. ಅಂದು ರಾತ್ರಿ ನೀರಿನಲ್ಲಿಬಂಡಿ ಉತ್ಸವ ನೆರವೇರಲಿದೆ. ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿದೆ.