ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಸಂಭ್ರಮ, 14 ರಂದು ಮಂಜುನಾಥ ಸ್ವಾಮಿಗೆ ಲಕ್ಷದೀಪೋತ್ಸವ

ಧರ್ಮಸ್ಥಳ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮವು ಡಿ.10 ರಿಂದ ಆರಂಭಗೊಂಡಿದ್ದು, 14ರ ವರೆಗೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿ ಭವನಗಳು, ಉದ್ಯಾನ, ಪ್ರವೇಶ ದ್ವಾರ, ಬಾಹುಬಲಿ ಬೆಟ್ಟ ವಿದ್ಯುದ್ದೀಪಗಳಿಂದ ಶೋಭಿಸುತ್ತಿವೆ.

ಪ್ರತಿ ವರ್ಷದಂತೆ ಈ ಬಾರಿಯೂ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಯುಟ್ಯೂಬ್ ಮತ್ತು ಫೇಸ್ ಬುಕ್ ‍ನಲ್ಲಿ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ. ಈ ಬಾರಿ ವಸ್ತುಪ್ರದರ್ಶನ ಇರುವುದಿಲ್ಲ.

ಡಿ.13 ರಂದು ಸರ್ವಧರ್ಮ ಸಮ್ಮೇಳನದ 88ನೇ ಅಧಿವೇಶನವನ್ನು ವಸತಿ ಸಚಿವ ವಿ.ಸೋಮಣ್ಣ ಉದ್ಘಾಟಿಸಲಿದ್ದಾರೆ. ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು.

ಡಿ.14 ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ಹಿರಿಯ ವಿದ್ವಾಂಸ ಡಾ.ಎಸ್ ರಂಗನಾಥ್ ಉದ್ಘಾಟಿಸಲಿದ್ದು, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಅದೇ ರಾತ್ರಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles