ಧನುರ್ಮಾಸದಲ್ಲಿ ಅರುಣೋದಯ ಕಾಲದಲ್ಲಿ ಒಂದು ತಿಂಗಳು ಹುಗ್ಗಿಯನ್ನು ತಯಾರು ಮಾಡಿ ಧನುರ್ ನಾರಾಯಣನಿಗೆ ಸಮರ್ಪಿಸುವುದು ಹಿಂದೂ ಸಂಪ್ರದಾಯ.
ಮುದ್ಗಾನ್ನ ಎಂದರೆ ಹುಗ್ಗಿ ಅಕ್ಕಿಯ ಎರಡರಷ್ಟು ಪ್ರಮಾಣ ಹೆಸರುಬೇಳೆ, ಒಣಶುಂಠಿ, ಮೆಣಸು, ಜೀರಿಗೆ, ಪತ್ರೆ, ದಾಲ್ಚಿನ್ನಿ, ಜಾಜಿಕಾಯಿ, ಕೊಬ್ಬರಿ, ಲವಂಗ, ಉಪ್ಪು, ತುಪ್ಪ ಎಲ್ಲವನ್ನು ಕೂಡಿಸಿ ಬೇಯಿಸಿದ ಪದಾರ್ಥವೇ ಮುದ್ಗಾನ್ನ.
ಧನುರ್ಮಾಸದಲ್ಲಿ ದೇವರ ಪೂಜೆಗೆ, ನೈವೇದ್ಯ ಪ್ರಸಾದಕ್ಕೆ ಮುದ್ಗಾನ್ನವೇ ಏಕೆ? ಇದಕ್ಕೆ ನಾನಾ ಕಾರಣಗಳುಂಟು. ಸೂರ್ಯೋದಯವಾದೊಡನೆ ಚಳಿ ಹೆಚ್ಚಾಗುತ್ತದೆ. ಆದ್ದರಿಂದಲೇ ಮೈಬೆಚ್ಚಗಾಗಿಸುವ ಹಾಗು ಚಳಿಯನ್ನು ಎದುರಿಸುವ ಸಾಮರ್ಥ್ಯವನ್ನು ಕೊಡುವ ಸಾತ್ವಿಕ ಆಹಾರ ಎಂದರೆ ಹುಗ್ಗಿ. ಚಳಿಗಾಲದಲ್ಲಿ ಚರ್ಮ ಒಡೆದು ರೂಪಗೊಳ್ಳುವುದರಿಂದ ಚರ್ಮವನ್ನು ಸ್ನಿಗ್ಧಗೊಳಿಸುವ ಆಹಾರದ ಸೇವನೆ ತೀರಾ ಅವಶ್ಯ. ಈ ಸಮಯದಲ್ಲಿ ಶರೀರದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುವುದರಿಂದಲೂ, ಧನುರ್ಮಾಸದಲ್ಲಿ ಹುಗ್ಗಿಯನ್ನು ಸೇವಿಸುವುದರಿಂದ ಕೊಬ್ಬಿನ ಅಂಶವನ್ನು ಹೆಚ್ಚಿಸಿ ಶಾರೀರಿಕ ಸಮತೋಲನವನ್ನು ಕಾಪಾಡಿಕೊಳ್ಳಬಹುದು.