ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಇಂದು ಕಾಲಭೈರವಾಷ್ಟಮಿ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಕಾಲಭೈರವಾಷ್ಟಮಿ ವಿಶೇಷ ದಿನವಾದ ಇಂದು ಹೋಮ, ಅಭಿಷೇಕ ವಿಶೇಷ ಪೂಜೆ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆಯು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಗಳವರ ಸಾನ್ನಿಧ್ಯದಲ್ಲಿ ಜನವರಿ 6ರಂದು ನೆರವೇರಿತು.

ಇದೇ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಎಲ್ಲಾ ಪೂಜ್ಯ ಸ್ವಾಮೀಜಿಗಳವರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದು ಶ್ರೀ ಗುರುದೇವತಾ ಕೃಪೆಗೆ ಪಾತ್ರರಾದರು.

Related Articles

ಪ್ರತಿಕ್ರಿಯೆ ನೀಡಿ

Latest Articles