ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣೆ, ಸಂತ ಸಮಾವೇಶ

ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜನವರಿ 6ರಂದು ಆಯೋಜಿಸಲಾಗಿದ್ದ “ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ’ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು, ಪೇಜಾವರ ಮಠಾಧೀಶರಾದ ಶ್ರೀ ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು, ಬೇಲಿ ಮಠದ ಪೂಜ್ಯ ಶ್ರೀ ಶಿವರುದ್ರ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನೆರವೇರಿತು.

ಸಮಾರಂಭದಲ್ಲಿ ವಿವಿಧ ಮಠಗಳ ಮಠಾಧೀಶರುಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles