ಉಡುಪಿ: ಶ್ರೀ ಮನ್ಮಧ್ವಾಚಾರ್ಯರು ಶ್ರೀಕೃಷ್ಣನನ್ನು ಉಡುಪಿಯಲ್ಲಿ ಪ್ರತಿಷ್ಠಾಪಿಸಿದ ದಿನಾಚರಣೆ ಅಂಗವಾಗಿ ನಡೆಯುವ ಸಪ್ತೋತ್ಸವ ಕಾರ್ಯಕ್ರಮ ಜ.9ರಂದು ಶ್ರೀಕೃಷ್ಣ ಮಠದ ರಾಜಾಂಗಣದ ನರಹರಿ ತೀರ್ಥ ವೇದಿಕೆಯಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ನಡೆಯಿತು.
ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಪ್ತೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು.




























