30ಸಾವಿರ ಮಂದಿಗೆ ದಾಸೋಹ, ಬೂಂದಿ, ಮಾಲ್ದಿ, ಚಿತ್ರಾನ್ನ, ಕೀರಿನ ದಾಸೋಹ

ಸಿದ್ಧಗಂಗಾ ಮಠದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ದ್ವಿತೀಯ ಪುಣ್ಯಸಂಸ್ಮರಣೋತ್ಸವ

ತುಮಕೂರು: ನಡೆದಾಡುವ ದೇವರೆಂದೇ ಪ್ರಸಿದ್ಧರಾಗಿದ್ದ ತುಮಕೂರು ಶ್ರೀ ಸಿದ್ಧಗಂಗಾ ಮಠದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರು ಲಿಂಗೈಕ್ಯರಾಗಿ ಜನವರಿ 21ಕ್ಕೆ ಎರಡು ವರ್ಷ. ಈ ಹಿನ್ನೆಲೆಯಲ್ಲಿ ಶ್ರೀಗಳ ಪುಣ್ಯಸಂಸ್ಮರಣೋತ್ಸವ ಕಾರ್ಯಕ್ರಮಗಳು ಜನವರಿ 21ರಂದು ಬೆಳಗ್ಗೆ 11 ಗಂಟೆಗೆ ಶ್ರೀಮಠದಲ್ಲಿ ನಡೆಯಲಿದೆ.
ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ.
ಹರಚರಗುರುಮೂರ್ತಿಗಳು ಉಪಸ್ಥಿತರಿರಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭ ಮುಖ್ಯಮಂತ್ರಿಗಳು ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 111 ಅಡಿ ಎತ್ತರದ ಪ್ರತಿಮೆ ಸ್ಥಾಪನೆಗೆ ಸಂಬ0ಧಿಸಿದ ಸಮಗ್ರ ಯೋಜನೆಯ 3ಡಿ ಚಿತ್ರಗಳ ಅನಾವರಣ ಮಾಡಲಿದ್ದಾರೆ.




ಮಠದಲ್ಲಿರುವ ಶ್ರೀಗಳ ಗದ್ದುಗೆಗೆ ಜ. 21ರಂದು ಬೆಳಗ್ಗೆ 4 ರಿಂದಲೇ ವಿಶೇಷ ಪೂಜೆ, ರುದ್ರಾಭಿಷೇಕ ನೆರವೇರಲಿದೆ. ವಿವಿಧೆಡೆಯಿಂದ ಆಗಮಿಸುವ ಭಕ್ತರಿಗೆ ಮಠದ ನಾಲ್ಕು ಕಡೆ ವಿಶೇಷ ದಾಸೋಹ ವ್ಯವಸ್ಥೆ ಏರ್ಪಡಿಸಲಾಗಿದೆ.

ಕೋವಿಡ್ ನಿಯಮ ಪಾಲಿಸಿ: ಶ್ರೀ ಸಿದ್ಧಲಿಂಗ ಸ್ವಾಮೀಜಿ
ಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮಿಗಳವರು ಹಾಕಿಕೊಟ್ಟ ದಾಸೋಹದ ಮಾರ್ಗದಲ್ಲಿ ಮಠ ಮುನ್ನಡೆಯುತ್ತಿದೆ. ನಾಳೆ ದ್ವಿತೀಯ ವರ್ಷದ ಪುಣ್ಯಾರಾಧನೆಗೆ ವಿವಿಧೆಡೆಯಿಂದ ಸಹಸ್ರಾರು ಮಂದಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದುಮ ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಮಠದ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ.


Related Articles

ಪ್ರತಿಕ್ರಿಯೆ ನೀಡಿ

Latest Articles