ಕವಲೇದುರ್ಗದ ಡಾ. ಸಿದ್ಧಲಿಂಗ ಮಹಾಸ್ವಾಮೀಜಿ ಲಿಂಗೈಕ್ಯ

ತೀರ್ಥಹಳ್ಳಿ: ಕವಲೇದುರ್ಗ ರಾಜಗುರು ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಸಿದ್ಧಲಿಂಗ ಮಹಾಸ್ವಾಮೀಜಿ ಅವರು ಕೊರೊನಾದಿಂದ ಇಂದು ಲಿಂಗೈಕ್ಯರಾಗಿದ್ದಾರೆ.

ಶ್ರೀಗಳ ನಿಧನಕ್ಕೆ ಮುರುಘಾಮಠದ ಜಗದ್ಗುರು ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಮಹಾಸ್ವಾಮೀಜಿ, ಕೋಣಂದದೂರು ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಲಿಂಗೈಕ್ಯ ಡಾ. ಸಿದ್ಧಲಿಂಗ ಮಹಾಸ್ವಾಮೀಜಿ ಅವರು ಕವಲೇದುರ್ಗ ಕೆಳದಿ ಭುವನಗಿರಿ ಮಹಾಸಂಸ್ಥಾನ ಮಠದಲ್ಲಿ 1980 ರ ದಶಕದಲ್ಲಿ ಪೀಠಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕೆಳದಿ ಇರಿಹಾಸ ಮತ್ತು ಕವಲೇದುರ್ಗ ಇತಿಹಾಸದ ಸಂಶೋಧನೆ ಹಾಗೂ ಹಲವು ಗ್ರಂಥಗಳನ್ನು ಹೊರತರುವ ಮೂಲಕ ಪಿಎಚ್‌ಡಿ ಪದವಿ ಪಡೆದಿದ್ದರು.
ಕಳೆದ 12 ವರ್ಷಗಳಿಂದ ವೀರಶೈವರ “ಸಿದ್ಧಾಂತ ಶಿಖಾಮಣಿ’ ಪ್ರವಚನ, ಶಿವಪೂಜಾನುಷ್ಠಾನ ಮಾಡುವ ಮೂಲಕ ಆಧ್ಯಾತ್ಮಿಕವಾಗಿ ಹೆಸರು ಗಳಿಸಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles