ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಮತ್ತು ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಅವರನ್ನು ಗೌರವಿಸಿ, ಶ್ರೀಪಾದದ್ವಯರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಸಮಾಜಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಉಡುಪಿ ಶಾಸಕರಾದ ರಘುಪತಿ ಭಟ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ,ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರಾದ ಸುರೇಶ ನಾಯಕ್, ಮೊದಲಾದವರು ಉಪಸ್ಥಿತರಿದ್ದರು.
(ಚಿತ್ರ: ಪರಶುರಾಮ ಭಟ್)